ಕಟಪಾಡಿ ಬಳಿ ಹೆಚ್.ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಹಿನ್ನೆಲೆ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಸಂಗ್ರಹ ಚಿತ್ರ · KT Media
ಉಡುಪಿ ಜಿಲ್ಲೆ ಕಟಪಾಡಿ ಸಮೀಪದಲ್ಲಿ ಹೆಚ್.ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗುತ್ತಿರುವ ಘಟನೆ ಸಂಭವಿಸಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ. ಅನಿಲ ಸೋರಿಕೆಯ ಕಾರಣದಿಂದ ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ.
ಈ ಹಿನ್ನೆಲೆಯಲ್ಲಿ ಕಟಪಾಡಿ ಮೂಲಕ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಹಾಗೂ ವಾಹನ ಚಾಲಕರು ಅಧಿಕಾರಿಗಳು ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಿನಂತಿಸಲಾಗಿದೆ.

ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಆ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಸಹಕಾರ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
Really impressed with the user interface. Everything is where it should be and the games run without any glitches. Keep it up! phjilino2
Found this site through a friend and it did not disappoint. The customer support is very responsive and helpful. Keep it up phjiliuu!
If you are into slots then this is where you need to be. The graphics are great and the winning streaks are real. Give lancar138slot a try and see for yourself.
Finally found a place where the login doesn’t glitch. Everything is streamlined and the gaming experience is just seamless. 123jili123comlogin
The graphics are stunning and the gameplay is fluid. It is honestly one of the most polished apps I have used in a long time. Love 52betwinapp